ಕಳೆದ ಒಂದು ವಾರದಿಂದ ಬೆಂಗಳೂರು ಮಲೆನಾಡು ಆಗಿ ಬದಲಾಗಿದೆ. ಇಂದು ಸಹ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ತಮಿಳುನಾಡು ಸಹ ತತ್ತರಿಸಿದ್ದು, ಇದರ ಪರಿಣಾಮ ಬೆಂಗಳೂರಿಗೂ ಸಹ ತಟ್ಟಿದೆ. ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಸಲಾಗಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿ ಪ್ರಬಲವಾಗಿ ರೂಪಗೊಂಡ ಪರಿಣಾಮ ಮಳೆಯಾಗುತ್ತಿದೆ. ನವೆಂಬರ್ 11