ಬೆಂಗಳೂರು : ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ