ಮಂಗಳೂರು : ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ.ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಯಲ್ಲಿ ಮಳೆಗಾಲದ ವಾತಾವರಣ ಸೃಷ್ಟಿಯಾಗಿದೆ. ಅಸನಿ ಚಂಡಮಾರುತ ದೂರದೂರಿನ ಪ್ರವಾಸಿಗರಿಗೆ ಕಿರಿಕ್ ಕೊಟ್ಟಿದೆ.ಬಂಗಾಳ ಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗ್ತಿದೆ. ಗಾಳಿಯೂ ವೇಗವಾಗಿ ಬೀಸುತ್ತಿದೆ. ಸಾಲು ಸಾಲು ರಜೆಗಳ ನಡುವೆ ಮಂಗಳೂರಿಗೆ ಹೊರಟಿದ್ದ ಪ್ರವಾಸಿಗರಿಗೆ ನಿರಾಶೆಯಾಗಿದೆ. ಬೀಚ್ ಮತ್ತು