ಕರ್ನಾಟಕದಲ್ಲಿಸೆಪ್ಟೆಂಬರ್ ತಿಂಗಳಿನಲ್ಲಿ ಮುಂಗಾರು ಬಿರುಸು ಪಡೆದುಕೊಂಡಿದ್ದು, ಈ ತಿಂಗಳ ಆರಂಭದಿಂದಲೂ ರಾಜ್ಯದೆಲ್ಲೆಡೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಇನ್ನು 4 ದಿನಗಳ ಕಾಲ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದೆಲ್ಲೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಸೆಪ್ಟೆಂಬರ್ 12ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಈಗಾಗಲೆ ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದು ಉಡುಪಿ, ದಕ್ಷಿಣ