ಬೆಂಗಳೂರು : ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು (ಮೇ 19) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ಒಂದು ದಿನ ರಜೆ ನೀಡುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಹಿನ್ನೆಲೆ 1ರಿಂದ 10ನೇ ತರಗತಿಯವರಗೆ ಇಂದು