ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿವಿಧ ರಾಜ್ಯಗಳ ರಾಜ್ಯಪಾಲರಿಗೆ ಕಾರ್ಯ ನಿರ್ವಹಣೆಯ ಕುರಿತಾಗಿ ಕರೆಯೊಂದನ್ನು ನೀಡಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರದಂದು ಆರಂಭವಾಗಿರುವ ದೇಶದ ವಿವಿಧ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳ ಎರಡು ದಿನಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಯಾವುದೇ ರಾಜ್ಯವಿರಲಿ ರಾಜ್ಯಪಾಲರು ಅತ್ಯಂತ ಪ್ರಮುಖ ಕಾರ್ಯ ನಿರ್ವಹಿಸುತ್ತಾರೆ. ರಾಜ್ಯ ಸರ್ಕಾರಕ್ಕೆ ಮಾರ್ಗದರ್ಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಅವರು ಮುಖ್ಯ