ಬೆಂಗಳೂರು,ಅ.11 : ಒಂದರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸಲು ಹಾಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಪೂರ್ಣವಾಗಿ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಯಲಿದ್ದು, ಆ ಸಮಿತಿ ಒಪ್ಪಿಗೆ ಪಡೆದು ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು. ಶಾಲೆ ಆರಂಭಕ್ಕೆ ಶೌಚಾಲಯದ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಎಲ್ಲ ರೀತಿಯ