ಬೆಂಗಳೂರು : ಪ್ರಗತಿಯ ಮುನ್ನೋಟ ಎಂದೇ ಪರಿಗಣಿಸಲ್ಪಡುವ ರಾಜ್ಯ ಬಜೆಟ್ ಮಂಡನೆ ಆಗಿದೆ.ಮುಖ್ಯಮಂತ್ರಿ ಮೊದಲ ಬಾರಿಗೆ ಅಯವ್ಯಯ ಮಂಡಿಸಿದ್ದಾರೆ. ವಿತ್ತೀಯ ಕೊರತೆ ನಡುವೆಯೂ ಬೊಮ್ಮಾಯಿ ಬಜೆಟ್ ಜನಪ್ರಿಯ ಹಳಿ ಮೇಲೆಯೇ ಸಾಗಿದೆ. ಇದಕ್ಕೆ ಪ್ರಮುಖ ಕಾರಣ ವರ್ಷದೊಪ್ಪತ್ತಿನಲ್ಲಿ ಎದುರಾಗಲಿರುವ ವಿಧಾನಸಭೆ ಚುನಾವಣೆ ಎಂದರೇ ತಪ್ಪಾಗಲಿಕ್ಕಿಲ್ಲ.ಯಾವುದೇ ತೆರಿಗೆ ಭಾರ ಹೇರದೇ, ಹಲವು ಜನಪರ ನಿಲುವುಗಳನ್ನು ಕೈಗೊಳ್ಳಲಾಗಿದೆ. ಮಹತ್ವದ್ದು ಎನಿಸುವ ಯಾವುದೇ ದೊಡ್ಡ ಘೋಷಣೆಗಳು ಹೊರಹೊಮ್ಮಿಲ್ಲ. ಆದರೆ ಬಹುಸಂಖ್ಯಾತ ಹಿಂದೂಗಳ ಬೇಡಿಕೆಗಳನ್ನು ಈಡೇರಿಸುವ