ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧರ್ಮ ದಂಗಲ್ ಶುರುವಾಗಿದೆ. ಕಾಂಗ್ರೆಸ್ ಸರ್ಕಾರ ಆಪರೇಷನ್ ಪಠ್ಯ ಪುಸ್ತಕ ಮಾಡಲು ಹೊರಟಿದೆ. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪಠ್ಯ ಪುಸ್ತಕ ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ ಕಾನೂನು ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳುವುದಾಗಿ