ಚಿಕ್ಕಬಳ್ಳಾಪುರ : ತಡರಾತ್ರಿ ಜಿಲ್ಲೆಯಾದ್ಯಾಂತ ಧಾರಕಾರ ಮಳೆಯಾಗಿದ್ದು, ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ, ಗೌರಿಬಿದನೂರು ಭಾಗದಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ. ಗುಡಿಬಂಡೆ ಅಮಾನಿ ಬೈರಸಾಗರ ಕೆರೆ ಅಪಾಯದ ಮಟ್ಟ ಮೀರಿ ಕೋಡಿ ಹರಿಯುತ್ತಿದೆ. ಎಲ್ಲೆಲ್ಲಿ ಸಂಚಾರ ಬಂದ್?ಗುಡಿಬಂಡೆ-ಪೇರೇಸಂದ್ರ ಮಾರ್ಗ, ಗುಡಿಬಂಡೆ ಹಂಪಸಂದ್ರ-ಬಾಗೇಪಲ್ಲಿ ಮಾರ್ಗ, ಗುಡಿಬಂಡೆ-ಲಕ್ಕೇನಹಳ್ಳಿ ಮಾರ್ಗ, ರಾಮಪಟ್ಟಣ ನವಿಲುಗುರ್ಕಿ ಮಾರ್ಗ, ಗುಡಿಬಂಡೆ ಅಮಾನಿ ಭೈರಸಾಗರ ಮಾರ್ಗಗಳಲ್ಲಿ ರಸ್ತೆಯಲ್ಲೇ ನೀರು ಹರಿಯುತ್ತಿರುವುದರಿಂದ ಜಲದಿಗ್ಬಂಧನವಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿರುವ