ಕೊಚ್ಚಿ (ನ.04) : ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯವು ನ. 15 ರಿಂದ ಎರಡು ತಿಂಗಳು ತೀರ್ಥಯಾತ್ರೆಗಾಗಿ ತೆರೆಯಲಿದೆ ಎಂದು ದೇವಾಲಯದ ದೈನಂದಿನ ಕಾರ್ಯಚಟುವಟಿಕೆಗಳನ್ನು ನೋಡಿಕೊಳ್ಳುವ ತಿರುವಾಂಕೂರು ದೇವಸ್ವಂ ಬೋರ್ಡ್ ತಿಳಿಸಿದೆ. ಈ ವೇಳೆ ಭಕ್ತಾದಿಗಳು ತಮ್ಮೊಂದಿಗೆ ಕೋವಿಡ್ ಲಸಿಕೆಯ ಪ್ರಮಾಣಪತ್ರವನ್ನು, ಜತೆಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ಆರ್ಟಿ-ಪಿಸಿಆರ್ ವರದಿಯನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕು ಎಂದು ಟಿಡಿಬಿ ತಿಳಿಸಿದೆ. ಕೇರಳದ ಪಟ್ಟನಂತಿಟ್ಟ ಜಿಲ್ಲೆಯ ದೇವಾಲಯವು ಬುಧವಾರ ಚಿತಿರಾ ಅಟ್ಟವಿಶೇಷ