ನವದೆಹಲಿ : ಇನ್ನುಮುಂದೆ ಲೋಕಸಭೆ, ರಾಜ್ಯಸಭೆ ಅಧಿವೇಶನಗಳಲ್ಲಿ ಜುಮ್ಲಾಜೀವಿ, ಬಾಲ ಬುದ್ಧಿ, ಕೋವಿಡ್ ಸ್ಪ್ರೆಡರ್, ನಾಚಿಕೆಗೇಡು, ದ್ರೋಹ, ಭ್ರಷ್ಟ, ಅಸಮರ್ಥ, ಸರ್ವಾಧಿಕಾರಿ ಅಂತಹ ಅಸಂಸದೀಯ ಪದಗಳನ್ನು ಬಳಸುವಂತಿಲ್ಲ ಎಂದು ಲೋಕಸಭೆಯ ಸೆಕ್ರಟೇರಿಯಟ್ ಬಿಡುಗಡೆಗೊಳಿಸಿದ ಕಿರು ಪುಸ್ತಕದಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.ಇದೇ ಜುಲೈ 18ರಿಂದ ಪ್ರಾರಂಭವಾಗಲಿರುವ ಮುಂಗಾರು ಅಧಿವೇಶನಕ್ಕೂ ಮುಂಚಿತವಾಗಿ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಗಿದೆ. ಲೋಕಸಭೆಯಲ್ಲಿನ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 380ರ ಪ್ರಕಾರ, ಕಲಾಪದ ಸಂದರ್ಭದಲ್ಲಿ ಅಸಂಸದೀಯ ಪದಗಳನ್ನು ಬಳಸಿದರೆ ಸ್ಪೀಕರ್, ಅವರನ್ನು