ದಾವಣಗೆರೆ : ಕರ್ನಾಟಕ ಲೋಕಸೇವಾ ಆಯೋಗದ ಕಿರಿಯ ಸಹಾಯಕರ ಅಥವಾ ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯು ಜಿಲ್ಲೆಯ 24 ಕೇಂದ್ರಗಳಲ್ಲಿ ಇದೇ ಸೆ.18 ಮತ್ತು 19 ರಂದು ಅನುಕ್ರಮವಾಗಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಸೇರಿದಂತೆ ಇತರೆ ವಿದ್ಯುನ್ಮಾನ ಸಾಧನಗಳನ್ನು ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕರ್ನಾಟಕ