ಮುಂಬೈ : ಭಾರತದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಾಗರಿಕ ಅಧಿಕಾರಿಗಳು ರಸ್ತೆ ಸುರಕ್ಷತೆ ಕ್ರಮಗಳು ಮತ್ತು ನಿಯಮಗಳನ್ನು ಹೆಚ್ಚಿಸುತ್ತಿದ್ದಾರೆ.ಈ ನಿಟ್ಟಿನಲ್ಲಿ ಎಲ್ಲಾ ಮುಂಬೈ ಪೊಲೀಸರು, ಚಾಲಕರು ಮತ್ತು ಕಾರಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಅನ್ನು ಕಡ್ಡಾಯಗೊಳಿಸುವುದಾಗಿ ತಿಳಿಸಿದ್ದಾರೆ.2022ರ ನವೆಂಬರ್ 1ರಿಂದ ಹಿಂಭಾಗ ಕುಳಿತುಕೊಳ್ಳುವವರು ಸಹ ಸೀಟ್ ಬೆಲ್ಟ್ ಅನ್ನು ಕಡ್ಡಾಯವಾಗಿ ಧರಿಸಬೇಕಾಗುತ್ತದೆ.