ರಜೆ ನೀಡಿದ್ದ ಕಾಲೇಜುಗಳು ಇಂದಿನಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆ ತುಮಕೂರು ಜಿಲ್ಲೆಯ ಎಲ್ಲಾ ಕಾಲೇಜುಗಳ ಸುತ್ತಮುತ್ತ 144 ಸೆಕ್ಷನ್ ಜಾರಿಯಾಗಿದೆ. ಕಾಲೇಜಿನ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ತುಮಕೂರು ಜಿಲ್ಲಾಧಿಕಾರಿ ವೈಎಸ್ ಪಾಟೀಲ್ ಆದೇಶ ನೀಡಿದ್ದಾರೆ. ಮುಂದಿನ ಆದೇಶದ ವರೆಗೆ 144 ಸೆಕ್ಷನ್ ಜಾರಿ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಜಿಲ್ಲಾಡಳಿತ ಕೆಲ ಷರತ್ತುಗಳನ್ನ ವಿಧಿಸಿದೆ. ಗುರುತಿನ ಚೀಟಿ ಹೊಂದಿರುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಮಾತ್ರ ಕಾಲೇಜಿಗೆ