ಬೆಂಗಳೂರು : ರಾಜ್ಯದ ಕೆಲವು ರೆಸಿಡೆನ್ಷಿಯಲ್ (ವಸತಿ) ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಮುಂಜಾಗ್ರತೆ ಕ್ರಮವಾಗಿ ರೆಸಿಡೆನ್ಷಿಯಲ್ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ʼಪಬ್ಲಿಕ್ ಟಿವಿʼ ಜೊತೆ ಈ ಕುರಿತು ಮಾತನಾಡಿದ ಅವರು, ಕೆಲವು ವಸತಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಸಂಬಂಧಪಟ್ಟ ಶಾಲೆಗಳ ಆಡಳಿತ ಮಂಡಳಿಗೆ ಸೋಂಕು ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ