ಬೆಂಗಳೂರು(ಜು.26): ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 2 ವರ್ಷ ಪೂರೈಸಿದೆ. ಈ ಸಂಭ್ರಮದ ನಡುವೆಯೇ ಸಿಎಂ ಬಿಎಸ್ವೈ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇತ್ತು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸರ್ಕಾರದ ಎರದು ವರ್ಷದ ಸಾಧನಾ ಸಮಾವೇಶದಲ್ಲಿ ಯಡಿಯೂರಪ್ಪ ತಮ್ಮ ರಾಜೀನಾಮೆ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ಕೊಡುವಂತೆ ಬಿಜೆಪಿ ಹೈಕಮಾಂಡ್