ತೀವ್ರ ಕಲ್ಲಿದ್ದಲಿನ ಕೊರತೆಯಿಂದಾಗಿ ಶನಿವಾರ ಹಾಗೂ ಭಾನುವಾರ ಆರು ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿತ್ತು. ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ಸಾಕಷ್ಟುವ್ಯತ್ಯಯವಾಗಿದ್ದು, ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ತೀವ್ರ ವಿದ್ಯುತ್ ಕಡಿತ ಮಾಡಲಾಗುತ್ತಿದೆ.ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಲ್ಲಿನ ಉತ್ಪಾದನೆ 6220 ಮೆ.ವ್ಯಾ.ನಿಂದ 1915 ಮೆ.ವ್ಯಾಗೆ ಕುಸಿದಿದೆ. ಇದೇ ವೇಳೆ, ಬೇಸಿಗೆ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದರೂ, ಒಟ್ಟಾರೆ ಎಲ್ಲ ಮೂಲಗಳಿಂದ ಪೂರೈಕೆ ಆಗುತ್ತಿದ್ದ ವಿದ್ಯುತ್ ನಿತ್ಯದ ಸರಾಸರಿ 14,000