ಪಣಜಿ : ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅಧಿಕಾರದಿಂದ ಕೆಳಗಿಳಿಯುವ ನಿರ್ಧಾರ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಶುಕ್ರವಾರ ಸಂಜೆ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರು ಈ ಹಿಂದೆ ವಿದೇಶದಲ್ಲಿ ಚಿಕಿತ್ಸೆ ಪಡೆದು ಮತ್ತೆ ಮುಖ್ಯಮಂತ್ರಿಯ ಕರ್ತವ್ಯ ನಿಭಾಯಿಸುತ್ತಿದ್ದರು. ಆದರೆ ಇದೀಗ ತೀವ್ರ ಜ್ವರದಿಂದ ಬಳುತ್ತಿರುವ ಪರಿಕ್ಕರ್ ಅವರನ್ನು ಕಾಂಡೋಲಿಮ್ ನಲ್ಲಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಇದೀಗ