ಬೆಂಗಳೂರು : ನಟ ಶಶಿಕುಮಾರ್ ಅವರು ಇದೀಗ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣದಿಂದ ಕಾಂಗ್ರೆಸ್ ನ್ನು ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಗುರುವಾರ ತಮ್ಮ ಪದ್ಮನಾಭನಗರದ ನಿವಾಸದಲ್ಲಿ ಪಕ್ಷದ ಶಾಲು ಹೊದಿಸುವುದರ ಮೂಲಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಶಶಿಕುಮಾರ್ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕುಮಾರ್ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ಹೆಚ್ಚಾಗುತ್ತಿದೆ. ಅರ್ಹರಿಗೆ ಟಿಕೆಟ್ ನೀಡದೆ, ನಂಬಿಸಿ ಕತ್ತು ಕೊಯ್ಯುವ ಕೆಲಸ