ಬೆಂಗಳೂರು: ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಶಿರಾಡಿಘಾಟ್ ನಲ್ಲಿ ಸಂಚಾರವನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗಿದೆ.ನಿನ್ನೆಯವರೆಗೆ ಶಿರಾಡಿ ಘಾಟ್ ನಲ್ಲಿ ಸಂಚಾರ ನಿಶೇಧಿಸಿ ಇದಕ್ಕೂ ಮೊದಲು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಆದೇಶಿಸಿದ್ದರು. ಆದರೆ ಇದೀಗ ಮತ್ತೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ಬಂದ್ ವಿಸ್ತರಿಸಲಾಗಿದೆ.ಮುಂದಿನ ಆದೇಶದವರೆಗೂ ಶಿರಾಡಿ ಘಾಟ್ ನಲ್ಲಿ ಸಂಚಾರ ನಿಷೇಧ ಮುಂದುವರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಈಗಾಗಲೇ ಮಂಗಳೂರು-ಬೆಂಗಳೂರು ಸಂಪರ್ಕಿಸಲು ಚಾರ್ಮಾಡಿ ಘಾಟ್ ಏಕೈಕ ಮಾರ್ಗವಾಗಿದೆ.