ನವದೆಹಲಿ, ಸೆ 28 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೊಸ ಅಬಕಾರಿ ನೀತಿಯೊಂದನ್ನು ಜಾರಿಗೆ ತಂದಿದ್ದು, ಅದರ ಅನುಸಾರವಾಗಿ ಅಕ್ಟೋಬರ್ 1ರಿಂದ ಖಾಸಗಿ ಮದ್ಯ ಅಂಗಡಿಗಳನ್ನು ತೆರೆಯುವಂತಿಲ್ಲ ಎಂಬ ಆದೇಶವನ್ನು ಹೊರಡಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅಕ್ಟೋಬರ್ 1ರಿಂದ 45 ದಿನಗಳ ಕಾಲ ಖಾಸಗಿ ಲಿಕ್ಕರ್ ಶಾಪ್, ಬಾರ್ಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ತಿಳಿಸಿದೆ. ಹೊಸ ಅಬಕಾರಿ ನೀತಿಯನ್ನು