ಬೆಂಗಳೂರು: ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 12 ದಿನಗಳ ವಿಶ್ರಾಂತಿ ಪಡೆದು ಹೊಸ ಉತ್ಸಾಹದೊಂದಿಗೆ ಆಗಮಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಟ್ವಿಟರ್ ನಲ್ಲಿ ಸಕ್ರಿಯರಾಗಿದ್ದು, ಎದುರಾಳಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿದ್ದಾಗ ಬಜೆಟ್ ಬಗ್ಗೆ ತಮ್ಮ ಆಪ್ತರೊಂದಿಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸಂಭಾಷಣೆಯ ವಿಡಿಯೋ ವೈರಲ್ ಆಗಿದ್ದರ ಬಗ್ಗೆ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ.ಬೆಂಗಳೂರಿಗೆ ಬಂದ ಮೇಲೆ ಪತ್ರಕರ್ತರು ಈ ವಿವಾದದ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿದ್ದರಾಮಯ್ಯ ನಾನು ಅಸಮಾಧಾನಗೊಂಡಿದ್ದೇನೆಂದು