ಬೆಂಗಳೂರು: ಪ್ರತ್ಯೇಕ ರಾಜ್ಯ ಹೋರಾಟದ ಕಾವು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಾಸಕರು ಗರಂ ಆಗಿದ್ದಾರೆ.ಸಿಎಂ ಕುಮಾರಸ್ವಾಮಿ ಉತ್ತರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯದ ಹೇಳಿಕೆ ನೀಡಿರುವುದೇ ಈ ಹೋರಾಟಕ್ಕೆ ಕಾರಣವಾಗಿದೆ ಎಂದು ಸಿದ್ದರಾಮಯ್ಯ ಆಪ್ತರು ಕೆಂಡ ಕಾರಿದ್ದಾರೆ.ಉತ್ತರ ಕರ್ನಾಟಕ ರೈತರ ಬಗ್ಗೆ ಸಿಎಂ ಕುಮಾರಸ್ವಾಮಿ ಹಗುರವಾಗಿ ಮಾತನಾಡಿದ್ದು ತಪ್ಪು. ಅವರ ಹೇಳಿಕೆ ಹಿಂಪಡೆಯಬೇಕು. ಉತ್ತರ ಕರ್ನಾಟಕ ಭಾಗದವರಿಗೆ ಸಚಿವ ಸ್ಥಾನ