ಬೆಂಗಳೂರು: ಮುಂದಿನ ಸಿಎಂ ನಾನೇ ಎಂದು ಹೇಳಿಕೆ ನೀಡಿ ಮೈತ್ರಿ ಪಕ್ಷ ಜೆಡಿಎಸ್ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಉಂಟಾಗಿತ್ತು. ಹೀಗಾಗಿ ಮೈತ್ರಿ ಧರ್ಮ ಪಾಲಿಸುವಂತೆ ಸಿದ್ದರಾಮಯ್ಯಗೆ ಹಿರಿಯ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ.ಇದರ ಬೆನ್ನಲ್ಲೇ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು, ನಾನು ಮುಂದಿನ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ನಾನೇ ಸಿಎಂ ಆಗುವೆ ಎಂದಿದ್ದೆ