ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಮತ್ತೊಂದು ಸುತ್ತಿನ ಸಂಪುಟ ಪುನರಾಚನೆ, ಲೋಕಸಭೆ ಚುನಾವಣೆ ಪ್ರಕ್ರಿಯೆ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಯೋಜನೆಗಳಿಗೆ ಸಿದ್ಧವಾಗುತ್ತಿದ್ದಂತೆ ಮತ್ತೊಂದು ಸುತ್ತಿನ ಅತೃಪ್ತಿಯ ಹೊಗೆಯೂ ಏಳುವ ಲಕ್ಷಣ ಕಾಣುತ್ತಿದೆ.ಒಂದೆಡೆ ಉಸ್ತುವಾರಿ ಖಾತೆ ಹಂಚಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಕಣಕ್ಕಿಳಿಸಿ ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ಯೋಜನೆ ಕಾಂಗ್ರೆಸ್ ನಲ್ಲಿ ನಡೆಯುತ್ತಿದೆ.ಇದು ಸಿದ್ದರಾಮಯ್ಯ ಆಪ್ತರ ಅಸಮಾಧಾನಕ್ಕೆ ಕಾರಣವಾಗಬಹುದು ಎನ್ನಲಾಗಿದೆ. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸಿದರೆ ರಾಜ್ಯದಲ್ಲಿ ತಮ್ಮ