ಬೆಂಗಳೂರು: ದೆಹಲಿಯಲ್ಲಿ ರೈತರ ಬಗ್ಗೆ ಮಾತನಾಡುತ್ತಾ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.ನಿನ್ನೆ ಮಹಾರಾಷ್ಟ್ರದಲ್ಲಿ ಸೇವಾ ಗ್ರಾಮದಲ್ಲಿ ನಡೆಯುತ್ತಿರುವ ಎಐಸಿಸಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಟ್ವಿಟರ್ ಮೂಲಕ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ನಮ್ಮ ದೇಶದ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕುವುದನ್ನು ನೋಡಿದರೆ 2008 ರಲ್ಲಿ ಬಿಜೆಪಿ ಸರ್ಕಾರ ರೈತರ