ಸಿದ್ದರಾಮಯ್ಯ ಔತಣಕೂಟದ ಹಿಂದೆ ಭಾರೀ ಲೆಕ್ಕಾಚಾರ?!

ಬೆಂಗಳೂರು| Krishnaveni K| Last Modified ಮಂಗಳವಾರ, 3 ಜುಲೈ 2018 (08:54 IST)
ಬೆಂಗಳೂರು: ಇಂದು ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗಾಗಿ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ನಗರದ ಪಂಚತಾರಾ ಹೋಟೆಲ್ ನಲ್ಲಿ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ.


ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಕರೆದಿರುವ ಔತಣಕೂಟದಲ್ಲಿ ಕಾಂಗ್ರೆಸ್ ನ ವಿಧಾನ ಸಭೆ ಮತ್ತು ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಆದರೆ ಈ ಔತಣಕೂಟ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.


ಮುಂಬರುವ ದಿನಗಳಲ್ಲಿ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಹಂಚಿಕೆ ಇರುವುದರಿಂದ ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಔತಣಕೂಟ ನೆಪದಲ್ಲಿ ಪಕ್ಷದ ಬಲ ತಮ್ಮ ಕಡೆಗಿರುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.


ನಿನ್ನೆ ಸದನದಲ್ಲೂ ಡಿಸಿಎಂ ಪರಮೇಶ್ವರ್ ಗಿಂತ ಹೆಚ್ಚು ಕಾಂಗ್ರೆಸ್ ಶಾಸಕರು ಎರಡನೇ ಗ್ಯಾಲರಿಯಲ್ಲಿದ್ದ ಸಿದ್ದರಾಮಯ್ಯ ಸುತ್ತ ಸುಳಿದಾಡುತ್ತಿದ್ದುದು ಕಂಡು ಬಂತು. ಅಂತೂ ಔತಣಕೂಟ ನೆಪದಲ್ಲಿ ಸಿದ್ದರಾಮಯ್ಯ ಪಕ್ಷದಲ್ಲಿ ತನ್ನ ಹಿಡಿತ ಸಡಿಲವಾಗದಂತೆ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :