ಬೆಂಗಳೂರು : ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ. ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ.ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು. ಮನುಷ್ಯರೆಲ್ಲ ಒಂದೇ ಎಂದು