ಬೆಂಗಳೂರು : ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ನಟ ಜಗ್ಗೇಶ್ ಅವರು ನಟಿಸುತ್ತಿರುವ ಸಿನಿಮಾಗಳನ್ನು ಹಾಗೂ ರಿಯಾಲಿಟಿ ಶೋ ಗಳನ್ನು ಪ್ರಸಾರ ಮಾಡಬಾರದು ಎಂದು ಯಶವಂತಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಎಸ್ ಟಿ ಸೋಮಶೇಖರ್ ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.