Karnataka Rains Today:(ಆ.25): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹಮಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರ ಮಳೆ