ಬೆಂಗಳೂರು(ಸೆ.2) : ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು, ದಕ್ಷಿಣ ಮಲೆನಾಡಿನಲ್ಲಿ ಮಳೆಯಾಗುತ್ತಿದ್ದು, ಇಂದಿನಿಂದ ಸೆ.5ರ ವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ರಾಮನಗರ, ತುಮಕೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು