ಹೊಸದಿಲ್ಲಿ: ವೈದ್ಯಕೀಯ ಶಿಕ್ಷಣಕ್ಕೆ ನಡೆಸಲಾಗುವ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್’ ಅನ್ನು ರದ್ದು ಮಾಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪರೀಕ್ಷೆಯು ಪಾರದರ್ಶಕವಾಗಿ ಹಾಗೂ ನ್ಯಾಯಸಮ್ಮತವಾಗಿ ನಡೆಯದ ಕಾರಣ, ಅದನ್ನು ರದ್ದು ಮಾಡಬೇಕು ಎಂದು ಕೋರಿ 20 ವರ್ಷದ ಯುವಕನೊಬ್ಬ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿ ವಜಾ ಮಾಡಿ, ಈ ತೀರ್ಪು ನೀಡಿದೆ. ಲಕ್ಷಾಂತರ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದಾರೆ. ಹೀಗಿರುವಾಗ ಪರೀಕ್ಷೆ ರದ್ದು ಮಾಡುವುದು