ನವದೆಹಲಿ : ರಾಜ್ಯ ಪಠ್ಯಕ್ರಮವಿರುವ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ನೊಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ (ಕುಸ್ಮಾ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ಕುಸ್ಮಾ ವಾದವನ್ನು ತಿರಸ್ಕರಿಸಿತು. ಕುಸ್ಮಾ ಪರ ವಾದ ಮಂಡಿಸಿದ ವಕೀಲರು, ಬೋರ್ಡ್