ಲಕ್ನೋ : ಅಗ್ಗದ ಬೆಲೆಯೆಂದು ಹಚ್ಚೆ ಹಾಕಿಸಿಕೊಂಡಿದ್ದ ಇಬ್ಬರಿಗೆ ಹೆಚ್ಐವಿ ಸೋಂಕು ಕಾಣಿಸಿಕೊಂಡ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಓರ್ವ ಯುವಕ ಹಾಗೂ ಓರ್ವ ಮಹಿಳೆ ಅಗ್ಗದ ಬೆಲೆಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದರು. ಇದಾದ ಬಳಿಕ ಟ್ಯಾಟೂ ಹಾಕಿಸಿಕೊಂಡಿದ್ದವರ ಆರೋಗ್ಯವು ಹದಗೆಡಲು ಪ್ರಾರಂಭಿಸಿದೆ. ಅಸ್ವಸ್ವಸ್ಥರಾದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ಪದೇ ಪದೇ ಜ್ವರ ಬರುತ್ತಿದ್ದುದನ್ನು ಗಮನಿಸಿದ್ದ ಅವರಿಗೆ ವೈರಲ್ ಟೈಫಾಯಿಡ್, ಮಲೇರಿಯಾ ಸೇರಿದಂತೆ ಹಲವಾರು