ಬೆಂಗಳೂರು : ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಬಗ್ಗೆ ಮಂಗಳವಾರ ನಡೆಯಲಿರುವ ತಜ್ಞರ ಸಭೆಯಲ್ಲೂ ಚರ್ಚೆ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಓಮಿಕ್ರಾನ್ ಎಂಬ ಹೊಸ ಪ್ರಭೇದದ ಕೋವಿಡ್ 19 ಸೋಂಕಿನ ಬಗ್ಗೆ ಡಿಸೆಂಬರ್ 1ನೇ ತಾರೀಕಿನ ಬಳಿಕ ವರದಿ ಸಿಗಲಿದೆ. ಹಾಗಿದ್ದರೂ ಗಡಿಗಳಲ್ಲಿ, ವಿಮಾನ ನಿಲ್ದಾಣದಲ್ಲಿ