ಬೆಂಗಳೂರು : ರಾಜ್ಯದಲ್ಲಿ ಹಿಜಬ್ ಸಂಘರ್ಷದ ನಡುವೆ ಹೈಕೋರ್ಟ್ನಿಂದ ಶಾಲೆಗಳನ್ನು ಆರಂಭಿಸಲು ಆದೇಶ ಬಂದ ಹಿನ್ನೆಲೆ ಸೋಮವಾರದಿಂದ ಹತ್ತನೇ ತರಗತಿ ವರೆಗೆ ಎಲ್ಲಾ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.ಶಕ್ತಿ ಭವನದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಶಾಲೆಗಳ ಡ್ರೆಸ್ ಕೋಡ್ ವಿವಾದ ಶುರುವಾಗಿತ್ತು. ಬಳಿಕ ಹೈಕೋರ್ಟ್ ಮೆಟ್ಟಿಲೇರಿತ್ತು.ಇದೀಗ ನ್ಯಾಯಾಲಯ ನೀಡಿರುವ ಸೂಚನೆಯನ್ನು ಸರ್ಕಾರ ಗೌರವಿಸುತ್ತದೆ. ಮೊದಲ ಹಂತವಾಗಿ 10ನೇ ತರಗತಿ ವರೆಗೆ ಶಾಲೆಗಳನ್ನು