ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದರಲ್ಲಿ ಪೊಲೀಸ್ ಗೃಹ ಯೋಜನೆಗಾಗಿ 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಮೊಬಿಲಿಟಿ ಯೋಜನೆಗೆ 50 ಕೋಟಿ ರೂ.ಅನುದಾನ ತೆಗೆದಿರಿಸಲಾಗಿದೆ. ರಾಜ್ಯದಲ್ಲಿ ನೂತನ ಕೆಎಸ್ಆರ್ಪಿ ಮಹಿಳಾ ಕಂಪನಿ ಆರಂಭಕ್ಕೆ ಅಸ್ತು ಅನ್ನಲಾಗಿದೆ. ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ. ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ