ವಿಜಯಪುರ ಜಿಲ್ಲೆಯ ಇಂಡಿ ವಿಧಾನ ಸಭಾ ಮತಕ್ಷೇತ್ರದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಾಕಷ್ಟು ಗೊಂದಲ ಸೃಷ್ಟಿಸುತ್ತಿದೆ ಎಂದು ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಗಂಧ ಗಾಳಿ ಗೊತ್ತಿರದಿರುವವರು ಕೂಡಾ ಆ ಪಟ್ಟಿಯಲ್ಲಿ ಇದ್ದಾರೆ. ಮಾದ್ಯಮದಲ್ಲಿ ಬಂದಿರುವ ಪಟ್ಟಿ ಗೊಂದಲ ಸೃಷ್ಟಿಸುತ್ತಿದೆ. ಪಕ್ಷಕ್ಕಾಗಿ ಕೆಲಸ ಮಾಡಿದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೇಟ್ ಕೊಟ್ಟರೆ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ರಾಜ್ಯಾದ್ಯಕ್ಷರು ಕೂಡಾ ಇದಕ್ಕೆ ಸಮ್ಮತಿ ನೀಡಿದ್ದಾರೆ.