ಬೆಂಗಳೂರು (ಸೆ. 29) : ಜಗತ್ ವಿಖ್ಯಾತ ಮೈಸೂರು ದಸರಾ ಅನ್ನು ಈ ಬಾರಿ ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿ ಹಿರಿಯ ನಾಯಕ ಎಸ್ಎಂ ಕೃಷ್ಣಾ ಉದ್ಘಾಟಿಸಲಿದ್ದಾರೆ. ಈ ಬಾರಿ ದಸರಾ ಉದ್ಘಾಟಕರಾಗಿ ಎಸ್ ಎಂ ಕೃಷ್ಣ ಅವರನ್ನು ಆಯ್ಕೆ ಮಾಡಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಅಕ್ಟೋಬರ್ 7 ರಿಂದ ಆರಂಭವಾಗಲಿರುವ ನಾಡ ಹಬ್ಬ ದಸರಾ ಮಹೋತ್ಸವಕ್ಕೆ ಎಸ್ ಎಂ ಕೃಷ್ಣ ಅವರು ವಿದ್ಯುಕ್ತ ಚಾಲನೆ ನೀಡಲಿದ್ದಾರೆ.