ಚಿಕ್ಕಮಗಳೂರು : ಕರ್ನಾಟಕ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತನ ಮೊಗದಲ್ಲಿ ಸಂತಸ ಮೂಡಿದೆ. ಜೂನ್ ತಿಂಗಳ ಅರ್ಧಕ್ಕೆ ಮಳೆ ಕೈಕೊಟ್ಟು ಆತಂಕಕ್ಕೆ ಕಾರಣವಾಗಿತ್ತು. ಆದರೆ ಕಳೆದ ಒಂದು ವಾರದಿಂದ ಮಳೆ ಚುರುಕುಗೊಂಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು ನದಿಗಳು ಮೈತುಂಬಿ ಹರಿಯುತ್ತಿವೆ. ಜುಲೈ 12ರಂದು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ,