20 ಕ್ಷೇತ್ರಗಳಲ್ಲಿ 25 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 90 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗೆ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿ ಬದಲಾಗಿದೆ. ಮೂರೂ ಪಕ್ಷಗಳ ನಾಯಕರು ಹೆಚ್ಚು ಸ್ಥಾನ ಗೆಲ್ಲಿಸಲು ಮಿಂಚಿನಂತೆ ಕಾದಾಡಿದ್ದಾರೆ. ಅಖಾಡದಲ್ಲಿ ಧೂಳೆಬ್ಬಿಸಿದ್ದಾರೆ. ಈ ಹೋರಾಟಕ್ಕೆ ಮತದಾರ ಮತದಾನದ ಮುದ್ರೆ ಒತ್ತಿದ್ದು, ಇಂದು ತೀರ್ಪು ಬಹಿರಂಗವಾಗಲಿದೆ.ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ. ಈಗಾಗಲೆ 25 ಕ್ಷೇತ್ರಗಳ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆಗೆ ಸಕಲ