ಕೊರೊನಾ ಕಾರಣ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದ ಕಾರಣ ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂಕ ನಿಗದಿಗೊಳಿಸಲು ತೀರ್ಮಾನಿಸಲಾಗಿತ್ತು. ಜತೆಗೆ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಫಲಿತಾಂಶವನ್ನು ಘೋಷಣೆ ಮಾಡಲಾಗಿತ್ತು. ಆದರೆ ಹಲವಾರು ವಿದ್ಯಾರ್ಥಿಗಳು ಆ ಫಲಿತಾಂಶವನ್ನು ಒಪ್ಪಿರಲಿಲ್ಲ. ಅದನ್ನು ತಿರಸ್ಕರಿಸಿ ಪರೀಕ್ಷೆ ಬರೆದಿದ್ದರು. ಅದರ