ನವದೆಹಲಿ : ಲಸಿಕಾ ಅಭಿಯಾನ ಒಂದು ವರ್ಷ ಪೂರೈಸಿರುವ ಕುರಿತು ಟ್ವೀಟ್ ಮಾಡಿರುವ ಅವರು, ಲಸಿಕೆ ಪಡೆದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ.ಲಸಿಕಾ ಅಭಿಯಾನವು ಕೊರೊನಾ ವಿರುದ್ಧ ಹೋರಾಡಲು ಹೆಚ್ಚಿನ ಶಕ್ತಿಯನ್ನು ನೀಡಿದೆ. ಕೊರೊನಾ ಸಾಂಕ್ರಾಮಿಕ ಮೊದಲ ಬಾರಿಗೆ ಅಪ್ಪಳಿಸಿದಾಗ ಈ ಬಗ್ಗೆ ನಮಗೂ ಹೆಚ್ಚೆನೂ ಮಾಹಿತಿ ಇರಲಿಲ್ಲ. ಆದರೂ ವಿಜ್ಞಾನಿಗಳು ಲಸಿಕೆಯನ್ನು ಅಭಿವೃದ್ಧಿ ಪಡಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.ಲಸಿಕೆ ಮೂಲಕ ಕೊರೊನಾ ವಿರುದ್ಧ ಹೋರಾಡಲು ನಮಗೆ ಸಹಾಯವಾಗಿದೆ ಎಂದು ತಿಳಿಸಿದ್ದಾರೆ.