ಬೆಂಗಳೂರು, ಸೆ 25 : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಇದರಿಂದಾಗಿ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂನಲ್ಲಿ ಸಡಿಲಿಕೆ ಮಾಡಲಾಗಿದೆ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. ಅದೇ ರೀತಿ ಅಕ್ಟೋಬರ್ 1ರಿಂದ ಸಿನಿಮಾ ಮಂದಿರಗಳಲ್ಲಿ ಹೌಸ್ಫುಲ್ಗೆ ಅನುಮತಿ ನೀಡಲಾಗುತ್ತಿದೆ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೋವಿಡ್ ಸಲಹಾ ಸಮಿತಿ ಅಧಿಕಾರಿಗಳೊಂದಿಗೆ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ರಾಜ್ಯದಲ್ಲಿ ನೈಟ್