ದೆಹಲಿ : ಕೊರೊನಾ ವೈರಸ್ನ ಹೊಸ ರೂಪಾಂತರ ಒಮಿಕ್ರಾನ್ ಪರಿಸ್ಥಿತಿ ನಿಭಾಯಿಸಲು ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ ಭಾರತದಲ್ಲಿ ಕೊವಿಡ್ 19 ಮೂರನೇ ಅಲೆ ಬೃಹತ್ ಪ್ರಮಾಣದಲ್ಲಿ ಕಾಣಿಸಿಕೊಳ್ಳುವುದರಲ್ಲಿ ಸಂಶಯವೇ ಇಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ ಹೇಳಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎಂಎ ವೈದ್ಯರು, ಒಮಿಕ್ರಾನ್ ತಳಿ ಆತಂಕ ಉಂಟು ಮಾಡುವಂಥ ಸೋಂಕು, ಇದು ವೇಗವಾಗಿ ಹರಡುತ್ತದೆ ಮತ್ತು ಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ