ನವದೆಹಲಿ : ಭಾರತದಲ್ಲಿ ಕೊರೊನಾ ಮೂರನೇ ಅಲೆ ಬಂದಿರುವುದನ್ನು ಕೇಂದ್ರ ಆರೋಗ್ಯ ಇಲಾಖೆ ಅಧಿಕೃತಗೊಳಿಸಿದೆ. ಇಂದು 491 ಮಂದಿ ಮರಣಹೊಂದಿದ್ದಾರೆ. ಈ ಮೂಲಕ ಒಟ್ಟು ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 4,87,693ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ 19,24,051 ಸಕ್ರಿಯ ಪ್ರಕರಣಗಳಿವೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಹಲವು ಮಾಹಿತಿಗಳನ್ನು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಪೈಕಿ ದೇಶದಲ್ಲಿ 515 ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ 5%ಗಿಂತ ಹೆಚ್ಚಾಗಿದೆ. 11 ರಾಜ್ಯಗಳಲ್ಲಿ