ನಾವು ಈ ಸಂಗತಿಯನ್ನು ಪದೇಪದೆ ಚರ್ಚಿಸುತ್ತಿದ್ದೇವೆ. ಒಮೈಕ್ರಾನ್ ರೂಪಾಂತರಿಯನ್ನು ನಾವ್ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ. ರಾಜ್ಯ ಕೊವಿಡ್ ಟಾಸ್ಕ್ ಫೋರ್ಸ್ ಚೇರ್ಮನ್ ಡಾ ದೇವಿಪ್ರಸಾದ್ ಶೆಟ್ಟಿ ಅದನ್ನೇ ಹೇಳಿದ್ದಾರೆ. ಅದು ಬೇರೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿದೆ ಎಂದರೆ, ಭಾರತದಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳ ಸರ್ಕಾರಗಳು ಸಾಧ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತರುತ್ತಿವೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರ ಯಾವ ಹಂತದಲ್ಲೂ