ಜನಸೇನಾ ಪಕ್ಷದ ನಾಯಕರಾದ ನಟ ಪವನ್ ಕಲ್ಯಾಣ್ ಮನಸ್ಸು ಜನರ ಕಷ್ಟಕ್ಕೆ ಸ್ಪಂದಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ

ಹೈದರಾಬಾದ್, ಶುಕ್ರವಾರ, 25 ಮೇ 2018 (06:57 IST)

ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಯೊಬ್ಬಳ ಚಿಕಿತ್ಸೆಗಾಗಿ ಸಹಾಯ ಹಸ್ತ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ನಟ ಪವನ್ ಕಲ್ಯಾಣ್ ಅವರು ಜನಸೇನಾ ಪಕ್ಷದ ನಾಯಕ ರಾಗಿ ಸಿನಿಮಾರಂಗದಿಂದ ರಾಜಕೀಯಕ್ಕೆ ಧುಮುಕಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದರು. ಈ ನಡುವೆ ಇದೀಗ ಅವರು ಶನಿವಾರ ವಿಜಯವಾಡದಲ್ಲಿ 'ಸ್ನಾಯುಕ್ಷಯ’ ಖಾಯಿಲೆಯಿಂದ ಬಳಲುತ್ತಿರುವ ಆರು ವರ್ಷದ ಬಾಲಕಿ ರೇವತಿ ಹಾಗೂ ಅವರ ಕುಟುಂಬವನ್ನು ತಮ್ಮ ಭೇಟಿಗಾಗಿ ತಮ್ಮ ಕಚೇರಿಗೆ ಆಹ್ವಾನಿಸಿ ಆಕೆಯ ಆರೋಗ್ಯದ ಕುರಿತು ವಿಚಾರಿಸಿದ್ದಲ್ಲದೇ ಅವಳ ಕಾಯಿಲೆಯ ಚಿಕಿತ್ಸೆಗೆ ಹಾಗೂ ಶಿಕ್ಷಣದ ವೆಚ್ಚವನ್ನು ತಾವೇ ಭರಿಸುವುದಾಗಿ ಅಭಯ ಹಸ್ತ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಇದೀಗ ಬಾಲಕಿಯು ಮೈಸೂರು ವೈಧ್ಯಕೀಯ ವಿಜ್ಞಾನ ಸಂಶೋಧನೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ತಾಯಿ ತಮ್ಮ ಮೆಚ್ಚಿನ ನಾಯಕನಿಗೆ ಭಾವನಪೂರ್ವಕವಾಗಿ ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆರ್‌ಆರ್ ನಗರ ಚುನಾವಣೆಯಲ್ಲಿ ಮೈತ್ರಿ ಸರ್ಕಾರಕ್ಕೆ ಎದುರಾಗಿದೆ ಸಂಕಷ್ಟ

ಬೆಂಗಳೂರು : ಈಗಾಗಲೇ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಿಯಾಯ್ತು. ಆದರೆ ಈ ನಡುವೆ ...

news

ಗದಗ ಜಿಲ್ಲೆಯಲ್ಲಿ ಮಹಾಮಾರಿ ವೈರಸ್ ನಿಫಾ ವೈರಸ್ ಹರಡಿರುವ ಶಂಕೆ

ಗದಗ: ಮಾರಣಾಂತಿಕ ಮಹಾಮಾರಿ ಶಂಕಿತ ನೀಫಾ ವೈರಸ್ ಗದಗ ಜಿಲ್ಲೆಗೂ ಕಾಲಿಟ್ಟಿದೆ ಎನ್ನಲಾಗುತ್ತಿದೆ. ಗದಗ ...

news

ಕಾಂಗ್ರೆಸ್ ಪಕ್ಷದ ಪತನಕ್ಕೆ ಇದು ಮೊದಲ ಮೆಟ್ಟಿಲು: ಶ್ರೀರಾಮುಲು

ಬೆಂಗಳೂರು: ನಿನ್ನೆ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ತೃತಿಯ ರಂಗದವರು ಭಾಗಿಯಾಗಿದ್ದರು. ಕಾಂಗ್ರೆಸ್ ಪಕ್ಷದ ...

news

ಎಸ್‌ಸಿಒ ಸಭೆಯಲ್ಲಿ ಮಹತ್ತರವಾದ ಹೇಳಿಕೆ ನೀಡಿದ ಪಾಕಿಸ್ಥಾನ

ಪಾಕಿಸ್ತಾನ : ಪಾಕಿಸ್ತಾನದಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಸಭೆಯಲ್ಲಿ, ಪಾಕಿಸ್ಥಾನವು ...