ಮೈಸೂರು : ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ, ಸೆ.26 ರಂದು ನಡೆಯಲಿರುವ ದಸರಾ ಮಹೋತ್ಸವವನ್ನು ರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ ಎಂದಿದ್ದಾರೆ.ದಸರಾ ಉದ್ಘಾಟನೆಗೆ ಯಾರನ್ನು ಕರೆಯಬೇಕು ಎಂದು ಚರ್ಚೆ ನಡೆಯುತ್ತಿದ್ದಾಗ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಷ್ಟ್ರಪತಿಗಳೂ ಬರಲು ಒಪ್ಪಿಕೊಂಡಿದ್ದಾರೆ. ಅವರಿಂದಲೇ ದಸರಾ ಉದ್ಘಾಟನೆಯಾಗಲಿದೆ ಎಂದು ಹೇಳಿದ್ದಾರೆ.